ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ!

kundapuradotcom@gmail.com
1 Min Read

ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಮಲೆನಾಡು, ಕರಾವಳಿ, ಬೆಳಗಾವಿ, ಬೆಂಗಳೂರಿನಲ್ಲಿ ಮಳೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ಆಗಸ್ಟ್ 13 ರಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಆಗಸ್ಟ್ 16ರವರೆಗೂ ಕರ್ನಾಟಕ ಹಲವೆಡೆ ವ್ಯಾಪಕ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದ್ದರೆ, ಆ.16ರಂದು ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಆಗಸ್ಟ್ 13 ರಿಂದ 16ರ ವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ ಜಿಲ್ಲೆಗಳ ಹಲವು ಕಡೆ ಭಾರಿ ಮಳೆ ಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಈಗ ಮಳೆಯ ಪ್ರಮಾಣ ತುಸು ಇಳಿಕೆಯಾಗಿದೆಯಾದರೂ ಇನ್ನೆರಡು ದಿನಗಳಲ್ಲಿ ಮಳೆ ಆರ್ಭಟ ಜೋರಾಗಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಆಗಸ್ಟ್‌ 13ರಿಂದ ಈ ಭಾಗದಲ್ಲಿ ಮಿಂಚು – ಗುಡುಗು ಸಹಿತ ಧಾರಾಕಾರ ಮಳೆ ಆಗಲಿದೆ. ಗಂಟೆಗೆ 40-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ಕೊಡಲಾಗಿದೆ.

Share This Article
Leave a Comment