ಕುಂದಾಪುರ ತಾಲೂಕಿನ ವಕ್ವಾಡಿ ಪ್ರೌಢಶಾಲೆಯಲ್ಲಿ ನಡೆಯಲಿರುವ ತಾಲೂಕು ಮಟ್ಟದ 14 ಹಾಗೂ 17 ರ ವಯೋಮಿತಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ- ಬಾಲಕಿಯರ ಕ್ರೀಡಾಕೂಟ- 2025- 26 ಇದರ ಲೋಗೋವನ್ನು ಉತ್ತರ ಕನ್ನಡದ ಹೊನ್ನಾವರ ಶ್ರೀದೇವಿ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಡಾ.ಚಂದ್ರಶೇಖರ್ ಶೆಟ್ಟಿ ಅನಾವರಣಗೊಳಿಸಿದರು. ನಂತರ ಅವರು ಮಾತನಾಡಿ, ಎಲ್ಲರನ್ನೂ ಒಗ್ಗೂಡಿಸುವ ಕ್ರೀಡಾಕೂಟವು ಕ್ರೀಡಾ ಸ್ಪೂರ್ತಿಯ ಜೊತೆಗೆ ಉತ್ಸಾಹ ಮೂಡಿಸಿ ಊರಿನಲ್ಲಿ ಒಗ್ಗಟ್ಟು ಪ್ರದರ್ಶಿಸುವುದರ ಮೂಲಕ ಕ್ರೀಡಾ ಸಂಭ್ರಮದಿಂದ ಊರಿಗೆ ಹೆಮ್ಮೆ ತರುವಂತಾಗಲಿ ಎಂದು ಶ್ಲಾಘಿಸಿ, ಶುಭ ಹಾರೈಸಿದರು.
ತಾಲೂಕು ಕ್ರೀಡಾಕೂಟದ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಸಣಗಲ್ ಮನೆ, ನಿವೃತ್ತ ಬ್ಯಾಂಕ್ ಮ್ಯಾನೇಜರ್ ವಿ.ಕೆ.ಶೆಟ್ಟಿ ವಕ್ವಾಡಿ, ಕುಂದಾಪುರ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ವಕ್ವಾಡಿ, ಯುವಜನ ಸೇವಾ ಕ್ರೀಡಾಧಿಕಾರಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಕುಸುಮಾಕರ ಶೆಟ್ಟಿ, ದೀಪಕ್ ಶೆಟ್ಟಿ ವಕ್ವಾಡಿ ಉಪಸ್ಥಿತರಿದ್ದರು.















